ದಿನಾಂಕ 07-04-2016ರ ಸಂಯುಕ್ತ ಕರ್ನಾಟಕದಲ್ಲಿ ಪ್ರಕಟವಾದ ನನ್ನ ಲೇಖನ.
ಹಚ್ಚೆಯ ಬಣ್ಣ ಶಾಶ್ವತವೇ?
ಹಚ್ಚೆಯ ಕುರಿತು ಮಾತನಾಡುವಾಗ ಒಂದು ಪ್ರಶ್ನೆ ಬರುವುದು ಸಹಜ. ಅದೇನೆಂದರೆ ಹಚ್ಚೆಯ ಬಣ್ಣವೇಕೆ ಶಾಶ್ವತ?. ಈ ಪ್ರಶ್ನೆಗೆ ಬಹುತೇಕರಲ್ಲಿ ಉತ್ತರವಿಲ್ಲ. ಇದ್ದರೂ ಅಸ್ಪಸ್ಟ ಉತ್ತರ. ಇದಕ್ಕೆ ಸ್ಪಷ್ಟ ಉತ್ತರ ವಿಜ್ಞಾನದಲ್ಲಿ ದೊರೆಯುತ್ತದೆ.
ಮಾನವರ ಚರ್ಮವು ಪ್ರತಿಗಂಟೆಗೆ 40000 ಕೋಶಗಳನ್ನು ಕಳೆದುಕೊಳ್ಳುತ್ತದೆ. ಅಂದರೆ ದಿನಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಕೋಶಗಳು ನಾಶವಾದರೂ ಹಚ್ಚೆ ಶಾಶ್ವತವಾಗಿ ಉಳಿಯುವುದ್ಹೇಗೆ ಎಂಬುದೇ ಸೋಜಿಗ.
ಹಚ್ಚೆ ಹಾಕುವ ಸೂಜಿಯಲ್ಲಿನ ಶಾಯಿಯು ಚರ್ಮದ ಹೊರಪದರದಲ್ಲಿ ರಂದ್ರಗಳನ್ನು ಮಾಡಿ ರಕ್ತನಾಳ ಮತ್ತು ನರಗಳ ಮೂಲಕ ಒಳಪದರದ ಆಳದೊಳಕ್ಕೆ ಜಿನುಗುತ್ತದೆ. ಪ್ರತಿಬಾರಿ ಸೂಜಿಯು ಚುಚ್ಚುವಿಕೆಯಿಂದ ಉಂಟಾದ ಗಾಯದಲ್ಲಿ ಈ ಶಾಯಿಯು ಹರಡಲ್ಪಡುತ್ತದೆ. ಗಾಯವು ಉರಿಯೂತಕ್ಕೆ ಕಾರಣವಾಗುತ್ತದೆ. ಚರ್ಮದಲ್ಲಿನ ಜೀವಕೋಶಗಳು ಪ್ರತಿರಕ್ಷಣಾ ವ್ಯವಸ್ಥೆಯಿಂದ ಗಾಯದ ಸ್ಥಳವನ್ನು ಆಕ್ರಮಿಸಿ ಬಣ್ಣವನ್ನು ಪಡೆದುಕೊಳ್ಳುತ್ತವೆ. ಹಾಗಾಗಿ ಗಾಯಗೊಂಡ ಸ್ಥಳದಲ್ಲಿನ ಶಾಯಿಯ ಬಣ್ಣ ಪಡೆದುಕೊಂಡ ಜೀವಕೋಶಗಳು ಅಲ್ಲಿಯೇ ಉಳಿದು ಶಾಶ್ವತ ಬಣ್ಣಕ್ಕೆ ತಿರುಗುತ್ತವೆ. ಜೀವಕೋಶದಲ್ಲಿನ ಫೈಬ್ರೋಪ್ಲಾಸ್ಟ್ ಮತ್ತು ಮಾಕ್ರೋಪೇಜ್‍ಗಳೆಂಬ ಅಂಶಗಳು ಬಣ್ಣವನ್ನು ಹೀರಿಕೊಂಡು ಚರ್ಮದ ಒಳಭಾಗವನ್ನು ಲಾಕ್ ಮಾಡುತ್ತವೆ ಮತ್ತು ಬಣ್ಣವನ್ನು ಹೊರಸೂಸುತ್ತವೆ.
ಆರಂಭದಲ್ಲಿ ಶಾಯಿಯು ಚರ್ಮದ ಹೊರಪದರದ ಕೆಳಭಾಗದಲ್ಲಿ ಸಂಗ್ರಹವಾಗುತ್ತದೆ. ನಂತರ ಹಾನಿಗೊಳಗಾದ ಹೊರಚರ್ಮದ ಜೀವಕೊಶಗಳು ದುರಸ್ತಿಯ ನಂತರ ಬಣ್ಣವನ್ನು ಹೊರಸೂಸುತ್ತವೆ. ಬಿಸಿಲು ಗಾಳಿಗೆ ಹೊರಚರ್ಮದ ಗಾಯಗೊಂಡ ಕೋಶಗಳು ನಾಶವಾಗಿ ಸಿಪ್ಪೆಸುಲಿದು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತವೆ ಮತ್ತು ಶಾಯಿಯ ಶಾಶ್ವತ ಬಣ್ಣ ಪಡೆದುಕೊಳ್ಳುತ್ತವೆ.
ಪ್ರಾಚೀನತೆಯಿಂದ ಇತ್ತೀಚಿನವರೆಗೆ,,,,
ಹಚ್ಚೆಯು ಕೇವಲ ಫ್ಯಾಷನ್ನಿನ ಪ್ರತೀಕವಲ್ಲ. ಅದು ಪುರಾತನ ಕಾಲದಿಂದ ಮಾನವನ ಬದುಕಿನೊಂದಿಗೆ ಹಾಸುಹೊಕ್ಕಾಗಿದೆ. ಜನರ ಆಚಾರ ವಿಚಾರ ಸಂಸ್ಕøತಿ ಧಾರ್ಮಿಕ ಸಂಪ್ರದಾಯಗಳ ಪ್ರತಿಬಿಂಬವಾಗಿದೆ. ಸಂಸ್ಕøತಿಯಿಂದ ಸಂಸ್ಕøತಿಗೆ, ಕಾಲದಿಂದ ಕಾಲಕ್ಕೆ, ಪ್ರದೇಶದಿಂದ ಪ್ರದೇಶಕ್ಕೆ ಹಚ್ಚೆಯ ಸ್ವರೂಪಗಳು ಬದಲಾಗಿರುವುದು ಇತಿಹಾಸದಿಂದ ತಿಳಿಯುತ್ತದೆ.
ಟ್ಯಾಟೂ ಎಂಬ ಇಂಗ್ಲೀಷ್ ಪದ ‘ಟಾಟೂ’ ಎಂಬ ಟಾಹಿಟಿ ದ್ವೀಪದ ಮೂಲದ್ದು. ಅಂದರೆ ‘ಗುರುತಿಸುವಿಕೆ’ ಎಂದರ್ಥ.
ಟ್ಯಾಟೂವಿನ ಇತಿಹಾಸ ಹುಡುಕಿ ಹೊರಟರೆ ಅದು ನಮ್ಮನ್ನು ಪೆರುವಿನ ಮಮ್ಮಿಗೆ ಕರೆದೊಯ್ಯುತ್ತದೆ. ಈಜಿಪ್ತಿನಲ್ಲಿ ಹುಟ್ಟಿಕೊಂಡ ಈ ಕಲೆಯು ಸಾಮ್ರಾಜ್ಯಗಳ ವಿಸ್ತರಣೆಯಿಂದ ವಿವಿಧ ನಾಗರೀಕತೆಗಳನ್ನು ತಲುಪಿತು. ಕ್ರೀಟ್, ಗ್ರೀಸ್, ಪರ್ಷಿಯಾ, ಅರೇಬಿಯನ್ ನಾಗರೀಕತೆಗಳಿಗೂ ವಿಸ್ತರಿಸಿತು. ಕ್ರಿ.ಪೂ.2000 ರಲ್ಲಿ ಈ ಕಲೆ ಚೀನಾ ತಲುಪಿತು.
ಕ್ರಿ.ಪೂ.6000 ರಲ್ಲಿ ಪೆರುವಿನ ಮಮ್ಮಿಯಲ್ಲಿ ಜಗತ್ತಿನ ಮೊದಲ ದಾಖಲಿತ ಹಚ್ಚೆಯು ಪತ್ತೆಯಾಗಿದೆ.
ಹಚ್ಚೆಯ ಕಲೆಯು ಪಾಶ್ಚಿಮಾತ್ಯರ ಸಂಸ್ಕøತಿಯ ಪ್ರತೀಕವೇ ಆಗಿತ್ತು ಎಂಬುದಕ್ಕೆ ಅವರು ಆಗಿದ್ದಾಂಗ್ಗೆ ಏರ್ಪಡಿಸುತ್ತಿದ್ದ ಹಚ್ಚೆ ಉತ್ಸವಗಳೇ ಸಾಕ್ಷಿ. ಪ್ರತಿ ಉತ್ಸವದಲ್ಲಿ ಹೊಸ ಹೊಸ ಶೈಲಿಗಳು, ವಿನ್ಯಾಸಗಳು ಪ್ರದರ್ಶಿತವಾಗುತ್ತಿದ್ದವು. ಈ ಉತ್ಸವಗಳ ಕಿರಿಕಿರಿಯಿಂದ ಮನನೊಂದÀ ಪೋಪ್ ಹೆಡ್ರಿ ಕ್ರಿ.ಶ.747 ರಲ್ಲಿ ಹಚ್ಚೆ ಹಾಕುವುದನ್ನು ನಿಷೇಧಿಸಿದರು. ಪುನಃ 12 ಶತಮಾನದಲ್ಲಿ ಪ್ರಾರಂಭವಾದರೂ 16 ನೇ ಶತಮಾನದವರೆಗೂ ಅದರ ಬಳಕೆ ಆಮೆ ವೇಗದಲ್ಲಿತ್ತು. 1691 ರಲ್ಲಿ ಪಾಶ್ಚಿಮಾತ್ಯ ನಾವಿಕ ವಿಲಿಯಂ ಡ್ಯಾಂಫರ್ ಪುನಃ ಹಚ್ಚೆಯ ಬಳಕೆಗೆ ಮುನ್ನುಡಿ ಬರೆದನು. ಅಲ್ಲಿಂದ ಹಚ್ಚೆಯು ಪಾಶ್ಚಿಮಾತ್ಯ ಸಂಸ್ಕøತಿಯ ಒಂದು ಭಾಗವೇ ಆಯಿತು.
ಪಾಶ್ಚಿಮಾತ್ಯರಲ್ಲಿ ಹಚ್ಚೆಯ ಬಳಕೆ ಕಡಿಮೆಯಾದ ಕಾಲಕ್ಕೆ ಜಪಾನ್‍ನಲ್ಲಿ ಪ್ರಸಿದ್ದಿ ಪಡೆಯಿತು. ಪ್ರಾರಂಭದಲ್ಲಿ ಅಪರಾಧಿಗಳನ್ನು ಗುರುತಿಸಲು ಅವರ ಹಣೆಗೆ ಹಚ್ಚೆಯ ಗೆರೆ ಹಾಕಲಾಗುತ್ತಿತ್ತು. ಕಾಲಕ್ರಮೇಣವಾಗಿ ಜಪಾನ್‍ನಲ್ಲಿ ಹಚ್ಚೆಯು ಸೌಂದರ್ಯಕಲೆಯಾಗಿ ಬೆಳೆಯಿತು. 1700 ರ ಸುತ್ತಮುತ್ತ ಜಪಾನ್‍ನಲ್ಲಿ ಹಚ್ಚೆ ಬಳಕೆಯ ಬಗ್ಗೆ ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೆ ತರಲಾಯಿತು. ಆಗ ಕೇವಲ ಶ್ರೀಮಂತರು ಮಾತ್ರ ಅಲಂಕಾರಿಕ ಉಡುಪುಗಳನ್ನು ಧರಿಸಲು ಅವಕಾಶವಿತ್ತು. ಇದಕ್ಕೆ ಪ್ರತಿಯಾಗಿ ಮಧ್ಯಮ ವರ್ಗದ ಜನರು ತಮ್ಮ ದೇಹವನ್ನು ಹಚ್ಚೆಯಿಂದ ಅಲಂಕರಿಸತೊಡಗಿದರು. ಇದು ಎಲ್ಲರನ್ನು ಆಕರ್ಷಿಸತೊಡಗಿತು. ಹೀಗಾಗಿ ಹಚ್ಚೆಯು ಹೆಚ್ಚು ವ್ಯಾಪಕವಾಗಿ ಜಗತ್ತಿನ ಎಲ್ಲೆಡೆ ಪಸರಿಸಿತು. ಹಚ್ಚೆಗೆ ಯಂತ್ರಗಳ ಬಳಕೆಯ ನಂತರ ಅದರ ವೇಗ ಹೆಚ್ಚಾಯಿತು.
ಇಂದು ಬಳಸುವ ಯಂತ್ರಗಳು ಪ್ರತಿನಿಮಿಷಕ್ಕೆ 50 ರಿಂದ 3000 ತರಂಗಾಂತರದಲ್ಲಿ ಚರ್ಮಕ್ಕೆ ಬಣ್ಣವನ್ನು ಸೇರಿಸುತ್ತವೆ.
ಹಚ್ಚೆಯನ್ನೂ ಅಳಿಸಬಹುದು!
ಒಮ್ಮೆ ಹಾಕಿದ ಹಚ್ಚೆಯನ್ನು ಅಳಿಸುವುದು ತುಂಬಾ ಕಷ್ಟಕರ. ಕೆಲವರು ಹಚ್ಚೆಯ ಭಾಗವನ್ನು ಕತ್ತರಿಸುವ ಅಥವಾ ಸುಟ್ಟುಕೊಳ್ಳುವಂಥಹ ಹುಚ್ಚು ಕೃತ್ಯಕ್ಕೆ ಮುಂದಾಗಿರುವುದೂ ಸತ್ಯ. ಇವುಗಳನ್ನು ಹೊರತುಪಡಿಸಿ ಹಚ್ಚೆಯನ್ನು ಅಳಿಸಿ ಹಾಕಲು ಅನೇಕ ವಿಧಾನಗಳಿವೆ. ಶಸ್ತ್ರ ಚಿಕಿತ್ಸೆ ಮಾಡಿಸುವುದು, ಡರ್ಮಬ್ರೆಷನ್, ರೇಡಿಯೋ ಫ್ರೀಕ್ವೆನ್ಸಿ ಮುಂತಾದವು ಚಾಲ್ತಿಯಲ್ಲಿವೆ. ಆದರೆ ಇವು ಸಂಪೂರ್ಣವಾಗಿ ಅಳಿಸಿ ಹಾಕುವುದಿಲ್ಲ. ಅಲ್ಪ ಪ್ರಮಾಣದ ಕಲೆ ಉಳಿಯುತ್ತದೆ. ಇವೆಲ್ಲವುಗಳಿಗಿಂತ ಅತ್ಯಂತ ಪರಿಣಾಮಕಾರಿ ಚಿಕಿತ್ಸೆ ಎಂದರೆ ಕ್ಯೂ ಲೇಸರ್ ವಿಧಾನ. ಇದು ಹಚ್ಚೆಯ ಕಲೆಯನ್ನು ಪೂರ್ಣ ಪ್ರಮಾಣದಲ್ಲಿ ಅಳಿಸಿಹಾಕುವ ಅತ್ಯಾಧುನಿಕ ಲೇಸರ್ ಚಿಕಿತ್ಸೆ. ಇದು ತುಂಬಾ ವೆಚ್ಚದಾಯಕವಾದರೂ ಅತ್ಯಂತ ಸುರಕ್ಷಿತ ವಿಧಾನವಾಗಿದೆ.
ಆರ್.ಬಿ.ಗುರುಬಸವರಾಜ
No comments:
Post a Comment